Index   ವಚನ - 665    Search  
 
ಉನ್ಮನಿಜ್ಞಾನದ ಗಮನ[ದ ಭಾವವು] ಲೌಕಿಕದ ನಿಷ್ಠೆಯ ದೃಷ್ಟಿ. ಶಾಂಭವಜ್ಞಾನದ [ಗಮನದ] ಭಾವವು ಪ್ರಾಣದ ಪರಿಣಾಮದ ನಿಲವು. ಸುಜ್ಞಾನದ ಗಮನದ ಭಾವವು ಉಪದೇಶ ಪ್ರಸೂತದ ಭಾವಭೇದ. ಈ ತ್ರಿವಿಧ ಚರಿತ್ರ, ಸಂಭಾಷಣೆಯ ಕೂಡಲಚೆನ್ನಸಂಗಾ ನಿಮ್ಮ ಶರಣ ಬಲ್ಲ.