Index   ವಚನ - 674    Search  
 
ಅರಿವಿನೆಡೆಯನರಿದೆಹೆನೆಂದರೆ ಅರಿವು ಮರಹಿಂಗೊಳಗಾಯಿತ್ತಾಗಿ, ಆ ಅರಿವಿಂದ ಅರಿದೆವೆಂಬ ಬರಿಜ್ಞಾನಿಯ ಮಾತ ಕೇಳಲಾಗದು. ಭಾವದಿಂದ ಭಾವಿಸಿದರೆ ಭಾವ ಭ್ರಾಂತಿಗೊಳಗಾಯಿತ್ತಾಗಿ ಭಾವದಿಂದ ಭಾವಿಸಿಹೆನೆಂಬ ಭ್ರಮಿತರ ಮಾತ ಕೇಳಲಾಗದು. ಜ್ಞಾನದಿಂದ ಅರಿದೆನೆಂದರೆ ಜ್ಞಾನ ಅಜ್ಞಾನಕ್ಕೊಳಗಾಯಿತ್ತಾಗಿ ಜ್ಞಾನದಿಂದ ಅರಿದೆನೆಂಬ ಅಜ್ಞಾನಿಯ ಮಾತ ಕೇಳಲಾಗದು, ಸುಜ್ಞಾನಭರಿತ ಕೂಡಲಚೆನ್ನಸಂಗಾ ನಿಮ್ಮ ಶರಣ.