Index   ವಚನ - 676    Search  
 
ಬಸವ ಬಿಲ್ಲಾಳಾಗಿ, ಹೊಸಭಕ್ತಿ ಅಂಬಾಗಿ, ಎಸೆದನಯ್ಯಾ ಆ ಲಿಂಗವನು ಗುರಿಮಾಡಿ. ಶಿಶುವ ಬಾಣ ಕೊಂಡು, ಬಸುರಮಧ್ಯವ ತಾಗೆ, ಹೊಸದೆಸೆಗಳೆಲ್ಲಾ ಕಾಣಬಂದವಯ್ಯಾ! ಭಸ್ಮದೆಣ್ಣೆಯ ಹೂಸಿ ಕೂಡಲಚೆನ್ನಸಂಗನಲ್ಲಿ ಬಸವಪೂಯದ ಬಂದು ಆರೈದ ಲಿಂಗವನು‌.