ವಚನ - 303     
 
ಬೆರಸುವಡೆ ಬೇಗ ತೋರಾ, ಹೊರ ಹಾಯ್ಕದಿರಯ್ಯಾ. ನಿಮ್ಮಲ್ಲಿಗೆ ಸಲೆ ಸಂದ ತೊತ್ತಾನು; ಎನ್ನ ಹೊರ ಹಾಯ್ಕದಿರಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ನಂಬಿ ಬೆಂಬಳಿ ಬಂದೆನು ಇಂಬುಗೊಳ್ಳಯ್ಯಾ ಬೇಗದಲಿ.