Index   ವಚನ - 725    Search  
 
ಅಂಗದ ಮೇಲೆ ಆಯತವಾದುದೆ ಇಷ್ಟಲಿಂಗ, ಆ ಇಷ್ಟಲಿಂಗವಿಡಿದಿಹುದೆ ಪ್ರಾಣಲಿಂಗ ಸ್ವಾಯತ, [ಇಷ್ಟಲಿಂಗ ಉದಯಿಸಿದಲ್ಲದೆ ಪ್ರಾಣಲಿಂಗವ ಕಾಣಬಾರದು] ಪ್ರಾಣಲಿಂಗ ಉದಯಿಸಿದಲ್ಲದೆ ಇಷ್ಟಲಿಂಗವ ಕಾಣಬಾರದು, ಈ ಭೇದವ ಭೇದಿಸಬಲ್ಲರೆ ಕೂಡಲಚೆನ್ನಸಂಗನಲ್ಲಿ ಲಿಂಗೈಕ್ಯವು.