Index   ವಚನ - 738    Search  
 
ಉಂಟೆಂಬ ವಸ್ತು ಇಲ್ಲೆಂಬ ಪ್ರಮಾಣ ಬಹುದು ಆಚಾರಕ್ಕಿಕ್ಕುವುದಿದು ಭಕ್ತಿಯೆ? ಉಂಟೆಂಬ ಉದ್ಭಾವಿಯಲ್ಲ, ಇಲ್ಲೆಂಬ ನಿರ್ಭಾವಿಯಲ್ಲ. ಇದು ಕಾರಣ ಕೂಡಲಚೆನ್ನಸಂಗಾ. ಸಜ್ಜನ ಶುದ್ಧ ಶಿವಾಚಾರಿಗಲ್ಲದೆ ಲಿಂಗೈಕ್ಯವಳವಡದು.