Index   ವಚನ - 758    Search  
 
ಅಂಗದ ಮೇಲೊಂದು ಲಿಂಗವು, ಲಿಂಗದ ಮೇಲೊಂದು ಅಂಗವು. ಆವುದು ಘನವೆಂಬೆ? ಆವುದು ಕಿರಿದೆಂಬೆ? ತಾಳೋಷ್ಠಸಂಪುಟಕ್ಕೆ ಬಾರದ ಘನ, ಉಭಯಲಿಂಗವಿರಹಿತವಾದ ಶರಣ. ಕೂಡಲಚೆನ್ನಸಂಗಾ ಲಿಂಗೈಕ್ಯವು.