Index   ವಚನ - 768    Search  
 
ಲಿಖಿತಕ್ಕೆ ಲಿಖಿತ ಮಹಾಲಿಖಿತವುಂಟೆಂಬೆನೆ? ಲಿಂಗ ಸಂಸಾರಿ, ಲಿಂಗವಿಲ್ಲೆಂಬೆನೆ? ಅಂಗ ಸಂಸಾರಿ, ಇಲ್ಲಿನ್ನಾವುದ ಘನವೆಂಬೆ, ಆವುದ ಕಿರಿದೆಂಬೆ, ತಾಳಸಂಪುಟಕ್ಕೆ ಬಾರದ ಘನವ? ಸುಖಕ್ಕೆ ಸುಖ ತಾರುಗಂಡು, ಸಮಸುಖವಾಗಿ, ಉಪಮಾತೀತ ತ್ರಿವಿಧ ಸಂಪತ್ತುಗಳೆಂಬ ವಾಯುವಾಕುಳದಲ್ಲಿ, ಆದಿ ಮಧ್ಯ ಅವಸಾನರಹಿತ ಅನಂತ ಶರಣ ಅಜಾತ, ಕೂಡಲಚೆನ್ನಸಂಗಾ ನಿರ್ನಾಮ ಲಿಂಗೈಕ್ಯ.