Index   ವಚನ - 826    Search  
 
ನಿತ್ಯನೆಂಬ ಭಕ್ತನ ಮನೆಗೆ ಘನಚೈತನ್ಯವೆಂಬ ಜಂಗಮ ಬಂದಡೆ, ಜಲವಿಲ್ಲದ ಜಲದಲ್ಲಿ ಪಾದಾರ್ಚನೆಯ ಮಾಡಿದಡೆ, ಮಾಡಿದ ಆ ಪಾದೋದಕವೆ ಮಹಾಪದವಯ್ಯಾ, "ಸ್ವಚ್ಛಾನಂದಜಲೇ ನಿತ್ಯಂ ಪ್ರಕ್ಷಾಲ್ಯ ಚರಪಾದುಕಾಂ| ತಚ್ಚ ಪಾದೋದಕಂ ಪೀತ್ವಾ ಸ ಮುಕ್ತೋ ನಾತ್ರ ಸಂಶಯಃ"|| ಎಂದುದಾಗಿ, ಆ ಪಾದೋದಕದಲ್ಲಿ ಪರಮಪರಿಣಾಮಿ ಕೂಡಲಚೆನ್ನಸಂಗಾ ನಿಮ್ಮ ಶರಣ.