Index   ವಚನ - 857    Search  
 
ಶೂನ್ಯ ಹುಟ್ಟದಂದು, ನಿಶ್ಶೂನ್ಯವಿಲ್ಲದಂದು, ಬ್ರಹ್ಮ ವಿಷ್ಣು ಮಹೇಶ್ವರರಿಲ್ಲದಂದು, ಹದಿನಾಲ್ಕು ದಿಗುವಳಯವಿಲ್ಲದಂದು, ಕೂಡಲಚೆನ್ನಸಂಗಯ್ಯನೆಂಬ ಹೆಸರು ಮುನ್ನಿಲ್ಲದಂದು.