Index   ವಚನ - 907    Search  
 
ಅಂದೊಮ್ಮೆ ಧರೆಯ ಮೇಲೆ ಬೀಜವಿಲ್ಲದಂದು ಬಸವನೆಂಬ ಗಣೇಶ್ವರನು ಭೋಂಕರಿಸಿ ಕೆಲೆದಡೆ ಬೀಜ ಉತ್ಪತ್ತಿಯಾಯಿತ್ತು. ಅದೆನೆ ಬಿತ್ತಿ ಅದನೆ ಬೆಳೆದು ಅಟ್ಟಟ್ಟು ಲಿಂಗಕ್ಕೆ ಬೋನವ ಮಾಡೆ, ನಾಗಲೋಕದ ನಾಗಗಣಂಗಳಿಗೆಯೂ ಬಸವಣ್ಣನ ಪ್ರಸಾದ, ಮತ್ಯಲೋಕದ ಮಹಾಗಣಂಗಳಿಗೆಯೂ ಬಸವಣ್ಣನ ಪ್ರಸಾದ, ದೇವಲೋಕದ ದೇವಗಣಂಗಳಿಗೆಯೂ ಬಸವಣ್ಣನ ಪ್ರಸಾದ, ಎಲೆ ಕೂಡಲಚೆನ್ನಸಂಗಮದೇವಾ, ನಿಮ್ಮಾಣೆ, ನಿಮಗೂ ಎನಗೂ ಬಸವಣ್ಣನ ಪ್ರಸಾದ.