Index   ವಚನ - 909    Search  
 
ಅಕಾಯನೆಂಬ ಜಂಗಮ ಮತ್ಯಕ್ಕೆ ಬಂದೆನ್ನ, ಧನ್ಯನ ಮಾಡಲೆಂದು, ಸಕಲ ಧಾನ್ಯಗಳ ಪೂರ್ವಾಶ್ರಯವ ಕಳೆದು ಪ್ರಸಾದವೆಂದು ಹೆಸರಿಟ್ಟನು. ಆ ಜಂಗಮದ ಹಸ್ತದಲ್ಲಿ ಭಕ್ತಿ ಇಹುದು, ಆ ಜಂಗಮದ ಜಿಹ್ವೆಯಲ್ಲಿ ಪ್ರಸಾದ ಇಹುದು, ಆ ಜಂಗಮದ ದೇಹದಲ್ಲಿ ಜಂಗಮ ಇಹುದು. ಇಂತೀ ತ್ರಿವಿಧಪ್ರಸಾದವನಿಕ್ಕಿದ ಜಂಗಮಕ್ಕೆ ಶರಣೆಂದು ಶುದ್ಧನಾದೆನಯ್ಯಾ, ಕೂಡಲಚೆನ್ನಸಂಗಮದೇವಾ.