Index   ವಚನ - 911    Search  
 
ಅಗ್ಘವಣಿ ಸುಯಿದಾನವಾದ ಶರಣಂಗೆ, ತನು ಸುಯಿದಾನವಾಗಬೇಕು. ತನು ಸುಯಿದಾನವಾದ ಶರಣಂಗೆ ಮನ ಸುಯಿದಾನವಾಗಬೇಕು. ಮನ ಸುಯಿದಾನವಾದ ಶರಣಂಗೆ ಪ್ರಾಣದ ಮೇಲೆ ಲಿಂಗ ಸಯವಾಗಬೇಕು. ಪ್ರಾಣದ ಮೇಲೆ ಲಿಂಗ ಸಯವಾಗದಿರ್ದಡೆ ಇದೆಲ್ಲ ವೃಥಾ ಎಂದಿತ್ತು, ಕೂಡಲಚೆನ್ನಸಂಗಯ್ಯನ ವಚನ.