Index   ವಚನ - 919    Search  
 
ಅಜಕೋಟಿ ಕಲ್ಪ ವರುಷದವರೆಲ್ಲರು ಹಿರಿಯರೆ? ಹುತ್ತೇರಿ ಬೆತ್ತ ಬೆಳೆದ ತಪಸ್ವಿಗಳೆಲ್ಲರು ಹಿರಿಯರೆ? ನಡುಮುರಿದು ಗುಡುಗೂರಿ ತಲೆ ನಡುಗಿ ನೆರೆತೆರೆ ಹೆಚ್ಚಿ, ಮತಿಗೆಟ್ಟು ಒಂದನಾಡ ಹೋಗಿ ಒಂಬತ್ತನಾಡುವ ಅಜ್ಞಾನಿಗಳೆಲ್ಲರು ಹಿರಿಯರೆ? ಅನುವನರಿದು, ಘನವ ಬೆರಸಿ ಹಿರಿದು ಕಿರಿದೆಂಬ ಭೇದವ ಮರೆದು, ಕೂಡಲಚೆನ್ನಸಂಗಯ್ಯನಲ್ಲಿ ಬೆರಸಿ ಬೇರಿಲ್ಲದಿಪ್ಪ ಹಿರಿಯತನ ನಮ್ಮ ಮಹಾದೇವಿಯಕ್ಕಂಗಾಯಿತ್ತು.