Index   ವಚನ - 928    Search  
 
ಅನಂತ ವರುಷದವರ ಹಿರಿಯರೆಂಬೆನೆ? ಎನ್ನೆನು, ಅವರು ಭೂಭಾರಕರಾಗಿ. ಏಳು ವರುಷದ ಹಿರಿಯ ಚೀಲಾಳ; ಹನ್ನೆರಡು ವರುಷದ ಹಿರಿಯಳು ಮಹಾದೇವಿಯಕ್ಕ. ಅಂಡಜ ಪಿಂಡಜ ಮೀನಜರೆಂಬವರೆಲ್ಲಾ ಅಂದಂದಿನ ಬಾಲಕರು. ನಿಮಗೆ ಬುದ್ಧಿಯ ಹೇಳುವಡೆ ಎನಗೆ ಬುದ್ಧಿಯಿಲ್ಲ, ಕೂಡಲಚೆನ್ನಸಂಗಮದೇವಾ.