Index   ವಚನ - 931    Search  
 
ಅನ್ಯದೈವವ ಬಿಟ್ಟುದಕ್ಕೆ ಆವುದು ಕ್ರಮವೆಂದರೆ: ಅನ್ಯದೈವವ ಮನದಲ್ಲಿ ನೆನೆಯಲಾಗದು, ಅನ್ಯದೈವ ಮಾತನಾಡಲಾಗದು. ಅನ್ಯದೈವವ ಪೂಜೆಯ ಮಾಡಲಾಗದು. ಸ್ಥಾವರಲಿಂಗಕ್ಕೆರಗಲಾಗದು. ಆ ಲಿಂಗ ಪ್ರಸಾದವ ಕೊಳಲೆಂತೂ ಬಾರದು. ಇಷ್ಟು ನಾಸ್ತಿಯಾದರೆ ಆತ ಅನ್ಯದೈವವ ಬಿಟ್ಟು ಲಿಂಗವಂತನೆನಿಸಿಕೊಂಬನು. ಇವರೊಳಗೆ ಅನುಸರಣೆಯ ಮಾಡಿಕೊಂಡು ನಡೆದನಾದೊಡೆ ಅವಂಗೆ ಕುಂಭೀಪಾತಕ ನಾಯಕನರಕ ತಪ್ಪದು ಕಾಣಾ ಕೂಡಲಚೆನ್ನಸಂಗಯ್ಯ.