Index   ವಚನ - 330    Search  
 
ಮಾಟಕೂಟದಲ್ಲಿ ಬಸವಣ್ಣನಿಲ್ಲ. ನೋಟಕೂಟದಲ್ಲಿ ಪ್ರಭುದೇವರಿಲ್ಲ. ಭಾವಕೂಟದಲ್ಲಿ ಅಜಗಣ್ಣನಿಲ್ಲ. ಸ್ನೇಹಕೂಟದಲ್ಲಿ ಬಾಚಿರಾಜನಿಲ್ಲ ಇವರೆಲ್ಲರ ಕೂಟದಲ್ಲಿ ಚೆನ್ನಬಸವಣ್ಣನಿಲ್ಲ. ಎನಗಿನ್ನೇನಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ?