Index   ವಚನ - 988    Search  
 
ಆಕಾಶದಲ್ಲಾಡುವ ಪಟಕ್ಕಾದಡೆಯೂ ಮೂಲಸೂತ್ರವಿರಬೇಕು. ಕಲಿಯಾದಡೆಯೂ ಕಜ್ಜವಿಲ್ಲದೆ ಆಗದು. ಭೂಮಿಯಿಲ್ಲದೆ ಬಂಡಿ ನಡೆವುದೆ? ಅಂಗಕ್ಕೆ ಲಿಂಗವಿಲ್ಲದೆ ನಿಸ್ಸಂಗವಾಗಬಾರದು. ಕೂಡಲಚೆನ್ನಸಂಗಮದೇವರಲ್ಲಿ ಸಂಗವಿಲ್ಲದೆ ನಿಸ್ಸಂಗಿಯೆಂದು ನುಡಿಯಬಹುದೆ ಪ್ರಭುವೆ?