ವಚನ - 336     
 
ಮುತ್ತು ಒಡೆದಡೆ ಬೆಸೆಯಬಹುದೆ? ಮನ ಮುರಿದಡೆ ಸಂತಕ್ಕೆ ತರಬಹುದೆ? ಅಪ್ಪುಗೆ ಸಡಲಿದ ಸುಖವ ಮರಳಿ ಅರಸಿದರುಂಟೆ? ಸಾಧಕನೊಯಿದ ನಿಧಾನದ ಕುಳಿಯಂತೆ ಅಲ್ಲಿ ಏನುಂಟು? ಮಚ್ಚು ಪಲ್ಲಟವಾಗಿ, ನೋಟದ ಸುಖವ ಹಿಂಗಿದರೊಳವೆ? ನೋಡದಿರು, ಕಾಡದಿರು, ಮನ ಬಳಸದಿರು. ಭಾಷೆಗೆ ತಪ್ಪಿದರೆ ಮುಳ್ಳುಮೊನೆಯ ಕಿಚ್ಚಿನಂತೆ. ಲೇಸು ಬೀಸರವೋಗದ ಮುನ್ನ ಚೆನ್ನಮಲ್ಲಿಕಾರ್ಜುನನ ಕೂಡಿ ಧಾತುಗೆಟ್ಟ ಬಳಿಕ ಒಳವೆ?