Index   ವಚನ - 1030    Search  
 
ಇಡುವ ಕೊಡುವ, ಬಿಡುವ ಕಟ್ಟುವ ಗೊಡವೆಗಾರನಯ್ಯಾ ಶರಣನು ಗಾಳಿಯ ಮರೆಯ ಜ್ಯೋತಿಯಂತೆ, ಸುಖಸೂಸದೆ ಇಪ್ಪನು. ತನ್ನರಿವು ಮರವೆಗಳೆಲ್ಲಾ ಪ್ರಾಣಲಿಂಗಾಧೀನವಲ್ಲದೆ, ಮತ್ತೊಂದನರಿಯನು. ಆಸರುವನಲ್ಲ ಬೇಸರುವನಲ್ಲ; ಜಗದ ಕಳಕಳಕ್ಕೆ ಎದ್ದು ಹರಿದಾಡುವನಲ್ಲ. ಸುಖಮುದ್ರಿತನು ಕೂಡಲಚೆನ್ನಸಂಗಾ ಲಿಂಗೈಕ್ಯನು.