Up
ಶಿವಶರಣರ ವಚನ ಸಂಪುಟ
  
ಚನ್ನಬಸವಣ್ಣ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 1032 
Search
 
ಇನ್ನು ಮುಕ್ತಿಯೆಂದು ಮನದಲ್ಲಿ ಹೊಳೆದು ಕಾಮಿಸುವನ್ನಕ್ಕ ಪ್ರಸಾದಲಿಂಗ ಸಾಹಿತ್ಯವಾದುದಿಲ್ಲ. ಇನ್ನು ಪರವೆಂದು ಮನದಲ್ಲಿ ಹೊಳೆದು ಕಾಮಿಸುವನ್ನಕ್ಕ ಜಂಗಮಲಿಂಗ ಸಾಹಿತ್ಯವಾದುದಿಲ್ಲ. ಇನ್ನು ಲಿಂಗವ ಬೆರಸೇನೆಂದು ಮನದಲ್ಲಿ ಹೊಳೆದು ಕಾಮಿಸುವನ್ನಕ್ಕ ಶಿವಲಿಂಗವು ಸಾಹಿತ್ಯವಾದುದಿಲ್ಲ. ಇನ್ನು ವಿಶೇಷತ್ವವುಂಟೆಂದು ಮನದಲ್ಲಿ ಹೊಳೆದು ಕಾಮಿಸುವನ್ನಕ್ಕ ಶ್ರೀಗುರುಲಿಂಗವು ಸಾಹಿತ್ಯವಾದುದಿಲ್ಲ. ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಈ ಚತುರ್ವಿಧವು ಏಕೀಭವಿಸಿ ಮಹಾಲಿಂಗವಾದ ಮಹಾಮಹಿಮಂಗೆ ಇನ್ನು ಕಾಮಿಸಲಿಲ್ಲ ಕಲ್ಪಿಸಲಿಲ್ಲ, ಭಾವಿಸಲಿಲ್ಲ ಚಿಂತಿಸಲಿಲ್ಲ. ಆತ ನಿಶ್ಚಿಂತ ಪರಮಸುಖಿ ಪರಿಣಾಮಿ, ಆತನಿದ್ದುದೆ ಕೈಲಾಸ, ಆತ ಸರ್ವಾಂಗಲಿಂಗಿ, ಕೂಡಲಚೆನ್ನಸಂಗಯ್ಯಾ.
Art
Manuscript
Music
Your browser does not support the audio tag.
Courtesy:
Video
Transliteration
Innu muktiyendu manadalli hoḷedu kāmisuvannakka prasādaliṅga sāhityavādudilla. Innu paravendu manadalli hoḷedu kāmisuvannakka jaṅgamaliṅga sāhityavādudilla. Innu liṅgava berasēnendu manadalli hoḷedu kāmisuvannakka śivaliṅgavu sāhityavādudilla. Innu viśēṣatvavuṇṭendu manadalli hoḷedu kāmisuvannakka śrīguruliṅgavu sāhityavādudilla. Guruliṅga śivaliṅga jaṅgamaliṅga prasādaliṅga ī caturvidhavu ēkībhavisi mahāliṅgavāda mahāmahimaṅge Innu kāmisalilla kalpisalilla, bhāvisalilla cintisalilla. Āta niścinta paramasukhi pariṇāmi, ātaniddude kailāsa, āta sarvāṅgaliṅgi, kūḍalacennasaṅgayyā.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Music
Transliteration
Comment
None
ವಚನಕಾರ ಮಾಹಿತಿ
×
ಚನ್ನಬಸವಣ್ಣ
ಅಂಕಿತನಾಮ:
ಕೂಡಲಚೆನ್ನಸಂಗಮದೇವ
ವಚನಗಳು:
1762
ಕಾಲ:
12ನೆಯ ಶತಮಾನ
ಕಾಯಕ:
ಅನುಭಾವಿಗಳು ಬರೆದ ವಚನಗಳ ಪರಾಮರ್ಶೆ-ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಪ್ಪಡಿ ಸಂಗಮ, ಹುನುಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.- ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ತಂದೆ:
ಶಿವದೇವ (ಶಿವಸ್ವಾಮಿ)
ತಾಯಿ:
ನಾಗಲಾಂಬಿಕೆ(ಅಕ್ಕನಾಗಮ್ಮ)
ಐಕ್ಯ ಸ್ಥಳ:
ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: