Index   ವಚನ - 1073    Search  
 
ಎನ್ನ ದೃಷ್ಟಿ ನಿಮ್ಮ ರೂಪಿನಲ್ಲಿ ನಿಂದು ಕಾಣದು; ಎನ್ನ ಮನ ನಿಮ್ಮ ಕಳೆಯಲ್ಲಿ ಬೆರಸಿ ಅರಿಯದು. ಇದು ಕಾರಣ, ಕೂಡಲಚೆನ್ನಸಂಗಯ್ಯನಲ್ಲಿ ಅನುಪಮಸುಖಿಯಾನು.