Index   ವಚನ - 1078    Search  
 
ಎನ್ನ ಸಂಸಾರಸೂತಕವ ತೊಡೆದು, ನಿಜಲಿಂಗದಲ್ಲಿ ನಿರಹಂಕಾರವೆಂಬ ಘನವ ತೋರಿದನಯ್ಯಾ ಒಬ್ಬ ಶರಣನು. ಎನಗಾರು ಇಲ್ಲೆಂದು ಪ್ರಭುದೇವರೆಂಬ ಒಬ್ಬ ಶರಣನ. ಎನ್ನ ಕಣ್ಣಮುಂದೆ ಕೃತಾರ್ಥನ ಮಾಡಿ ಸುಳಿಸಿದನಯ್ಯಾ ಆ ಶರಣನು. ಆ ಶರಣನ ಕೃಪೆಯಿಂದ ಪ್ರಭುದೇವರೆಂಬ ಘನವ ಕಂಡು, ಮನ ಮನ ಲೀಯವಾಗಿ ಘನ ಘನ ಒಂದಾದ ಕಾರಣ, ಕೂಡಲಚೆನ್ನಸಂಗಯ್ಯನಲ್ಲಿ ಅಲ್ಲಯ್ಯನೆಂಬ ಮಹಿಮಂಗೆ ನಮೋ ನಮೋ ಎನುತಿರ್ದೆನು.