Index   ವಚನ - 350    Search  
 
ಲಿಂಗಪೂಜಕಂಗೆ ಫಲಪದಂಗಳಲ್ಲದೆ ಲಿಂಗವಿಲ್ಲ; ಧರ್ಮತ್ಯಾಗಿಗೆ ನರಕವಲ್ಲದೆ ಲಿಂಗವಿಲ್ಲ ವೈರಾಗ್ಯಸಂಪನ್ನಂಗೆ ಮುಕ್ತಿಯಲ್ಲದೆ ಲಿಂಗವಿಲ್ಲ; ಜ್ಞಾನಿಗೆ ಪರಿಭ್ರಮಣವಲ್ಲದೆ ಲಿಂಗವಿಲ್ಲ; ಇಂತಪ್ಪ ಭ್ರಾಂತನತಿಗಳೆದು ತನುತಾನಾದ ಇರವೆಂತೆಂದಡೆ ದ್ವೈತವಳಿದು ಅದ್ವೈತದಿಂದ ತನ್ನ ತಾನರಿದಡೆ ಚೆನ್ನಮಲ್ಲಿಕಾರ್ಜುನಲಿಂಗವು ತಾನೆ.