Index   ವಚನ - 1163    Search  
 
ಕೇಶ ಕಾಷಾಯಾಂಬರ ವೇಷ ಲಾಂಛನವಾದಡೇನೊ? ಗ್ರಾಸಕ್ಕೆ ಭಾಜನರಲ್ಲದೆ ಲಿಂಗಕ್ಕೆ ಭಾಜನರಲ್ಲ. ಈ ಆಸೆಯ ವೇಷವ ಕಂಡಡೆ ಕಾರಹುಣ್ಣಿಮೆಯ ಹಗರಣವೆಂಬೆ ಕಾಣಾ ಕೂಡಲಚೆನ್ನಸಂಗಮದೇವಾ.