Index   ವಚನ - 1167    Search  
 
ಕ್ರಿಯೆಯಿಲ್ಲದ ಭಕ್ತ ಮನುಜ, ಕ್ರಿಯೆಯಿಲ್ಲದ ಮಹೇಶ ರಾಕ್ಷಸ, ಕ್ರಿಯೆಯಿಲ್ಲದ ಪ್ರಸಾದಿ ಯವನ, ಕ್ರಿಯೆಯಿಲ್ಲದ ಪ್ರಾಣಲಿಂಗಿ ಭವಿ, ಕ್ರಿಯೆಯಿಲ್ಲದ ಶರಣ ಅಜ್ಞಾನಿ, ಕ್ರಿಯೆಯಿಲ್ಲದ ಲಿಂಗೈಕ್ಯ ಜನನಕ್ಕೊಳಗು ನೋಡಾ, ಕೂಡಲಚೆನ್ನಸಂಗಮದೇವಾ.