Index   ವಚನ - 1174    Search  
 
ಗಂಡಭೇರುಂಡನೆಂಬ ಪಕ್ಷಿಗೆ ತಲೆ ಎರಡು, ದೇಹವೊಂದು. ಒಂದು ತಲೆಯಲ್ಲಿ ಹಾಲನೆರೆದು, ಒಂದು ತಲೆಯಲ್ಲಿ ವಿಷವನೆರೆದಡೆ, ಆ ಪಕ್ಷಿಗೆ ಮರಣವಲ್ಲದೆ ಜಯವಪ್ಪುದೇ ಅಯ್ಯಾ? ಲಿಂಗವ ಪೂಜಿಸಿ ಜಂಗಮವ ಮರೆದಡೆ ಕುಂಭಿನೀನರಕ ತಪ್ಪುದು ಕಾಣಾ ಕೂಡಲಚೆನ್ನಸಂಗಮದೇವಯ್ಯಾ.