Index   ವಚನ - 1197    Search  
 
ಗುರುಲಿಂಗದಲ್ಲಿ ಆಗಾಗಿ ಆಚಾರಲಿಂಗಪ್ರಸಾದಿಯಾದ. ಆಚಾರಲಿಂಗದಲ್ಲಿ ಅವಧಾನಿಯಾಗಿ ಸರ್ವಾಚಾರಸಂಪನ್ನನಾದ. ಸರ್ವಾಚಾರಸಂಪತ್ತಿನಲ್ಲಿ ಲಿಂಗೈಕ್ಯನಾಗಿಪ್ಪನು. ಕೂಡಲಚೆನ್ನಸಂಗಯ್ಯನಲ್ಲಿ ಸಂಗನಬಸವಣ್ಣನು ಆಚಾರವ ಬಲ್ಲನಲ್ಲದೆ ನಾನೆತ್ತ ಬಲ್ಲೆನಯ್ಯಾ.