Index   ವಚನ - 1210    Search  
 
ಗುರುವಿನಲ್ಲಿ ಗುಣಸಂಪಾದನೆಯ ಮಾಡುವನ್ನಕ್ಕ ಗುರುಸಂಬಂಧಿಯಲ್ಲ. ಲಿಂಗದಲ್ಲಿ ಸ್ಥಲಸಂಪಾದನೆಯ ಮಾಡುವನ್ನಕ್ಕ ಲಿಂಗಸಂಬಂಧಿಯಲ್ಲ. ಜಂಗಮದಲ್ಲಿ ಜಾತಿಸಂಪಾದನೆಯ ಮಾಡುವನ್ನಕ್ಕ ಜಂಗಮಸಂಬಂಧಿಯಲ್ಲ. ಪ್ರಸಾದದಲ್ಲಿ ರುಚಿಸಂಪಾದನೆಯ ಮಾಡುವನ್ನಕ್ಕ ಪ್ರಸಾದಸಂಬಂಧಿಯಲ್ಲ. ಇದು ಕಾರಣ-ಕೂಡಲಚೆನ್ನಸಂಗಯ್ಯಾ ಮಜ್ಜನಕ್ಕೆರೆವ ಭವಿಗಳನೇನೆಂಬೆ.