Index   ವಚನ - 1218    Search  
 
ಗುರುವೆಂಬ ಗೂಳಿ ಮುಟ್ಟಲು, ಶಿಷ್ಯನೆಂಬ ಮಣಿಕ ತೆನೆಯಾಯಿತ್ತು. ಲಿಂಗವೆಂಬ ಕಿರುಗರು, ತನುವೆ ಕೆಚ್ಚಲು, ಮನವೆ ಮೊಲೆವಾಲು. ಅರಿದಲ್ಲಿ ಐಕ್ಯ, ಮರೆದಲ್ಲಿ ಸಾಹಿತ್ಯ. ಇದು ಕಾರಣ ಕೂಡಲಚೆನ್ನಸಂಗಯ್ಯನಲ್ಲಿ ಅನಾಚಾರಿಗಲ್ಲದೆ ಪ್ರಸಾದವಿಲ್ಲ.