Index   ವಚನ - 1219    Search  
 
ಗುರುವೆಂಬ ಪ್ರತಿಭಾವವಿಲ್ಲದ ಶಿಷ್ಯ; ಶಿಷ್ಯನೆಂಬ ಪ್ರತಿಭಾವವಿಲ್ಲದ ಗುರು; ಏನೆಂಬೆನೇನೆಂಬೆ ಎರಡಿಲ್ಲದ ಘನವನೇನೆಂಬೆನೇನೆಂಬೆ! ಉಭಯವಳಿದು ಒಂದಾದುದನೇನೆಂಬೆನೇನೆಂಬೆ: ಕೂಡಲಚೆನ್ನಸಂಗಯ್ಯನಲ್ಲಿ ಗುರುಶಿಷ್ಯಸಂಬಂಧವಪೂರ್ವ.