ವಚನ - 357     
 
ಲೋಕದ ಚೇಷ್ಟೆಗೆ ರವಿ ಬೀಜವಾದಂತೆ, ಕರಣಂಗಳ ಚೇಷ್ಟೆಗೆ ಮನವೇ ಬೀಜ. ಎನಗುಳ್ಳುದೊಂದು ಮನ. ಆ ಮನ ನಿಮ್ಮಲ್ಲಿ ಸಿಲುಕಿದ ಬಳಿಕ ಎನಗೆ ಭವವುಂಟೆ ಚೆನ್ನಮಲ್ಲಿಕಾರ್ಜುನಾ?