Index   ವಚನ - 1224    Search  
 
ಗುರುಶಿಷ್ಯಸಂಬಂಧಹವನೇನೆಂದುಪಮಿಸುವೆ? ಜ್ಯೋತಿಯಲೊದಗಿದ ಜ್ಯೋತಿಯಂತಿರಬೇಕು, ದರ್ಪಣದೊಳಡಗಿದ ಪ್ರತಿಬಿಂಬದಂತಿರಬೇಕು, ಸ್ಫಟಿಕದೊಳಗಿರಿಸಿದ ರತ್ನದಂತಿರಬೇಕು, ರೂಪಿನ ನೆಳಲಿನ ಅಂತರಂಗದಂತಿರಬೇಕು. ಇದು ಕಾರಣ, ಕೂಡಲಚೆನ್ನಸಂಗಯ್ಯಾ ದರ್ಪಣವ ದರ್ಪಣಕ್ಕೆ ತೋರಿದಂತಿರಬೇಕು.