Index   ವಚನ - 1300    Search  
 
ತೆಂಗಿನೊಳಗಣ ತಿರುಳು ಸೇವಿಸಬರ್ಪುದಲ್ಲದೆ ಹೊರಗಣ ಪರಟೆ ಸೇವಿಸಲು ಬಾರದು. ಚಾಂಡಾಲಂಗೆ ಜ್ಞಾನವಂಕುರಿಸಿದಡೆ ಆತನ ಅಂತರಂಗದ ವೃತ್ತಿಗೆ ಪೂಜ್ಯತೆಯಲ್ಲದೆ ಬಹಿರಂಗದ ತನುವಿಗೆ ಪೂಜ್ಯತೆಯಾಗದು. ಒಳಹೊರಗೆಂಬ ಭೇದವಿಲ್ಲದೆ ಸೇವಿಸಲುಚಿತವಪ್ಪಂತೆ ಶಿವಕುಲಪ್ರಸೂತಂಗೆ ಶಿವಜ್ಞಾನವಾಗಲು ಆತನ ತನುವೃತ್ತಿಗಳೆರಡೂ ಸೇವ್ಯವಾಗಿರ್ಪವು. ಇಂತಿದು ಸಾಧಕರ ಸ್ಥಿತಿಯಯ್ಯಾ ಕೂಡಲಚೆನ್ನಸಂಗಮದೇವಾ.