Index   ವಚನ - 365    Search  
 
ವಿರಕ್ತಿಯೇ ಅವಿರಕ್ತಿ, ವಿರಕ್ತನೆನ್ನದಿರಣ್ಣಾ. ನೋಟದ ಕರುಳ ಕೊಯ್ಯದನ್ನಕ್ಕರ, ಕ್ರೀಯದ ಕರಬೋನಗಳೊಡೆಯದನ್ನಕ್ಕರ, ಅಷ್ಟಮದಾದಿಗಳೆಂಬವ ಹೊಟ್ಟುಹುರಿಯದನ್ನಕ್ಕರ, ಬೇಕುಬೇಡಾಯೆಂದು ಪರಿವ ಸರ್ವಸಂದೇಹವ ಹೂಳದನ್ನಕ್ಕರ ವಿರಕ್ತವಿರಕ್ತನೆನ್ನದಿರಣ್ಣಾ. ಶ್ರೀಶೈಲಚೆನ್ನಮಲ್ಲಿಕಾರ್ಜುನದೇವನೊಬ್ಬನೆ ವಿರಕ್ತ ಕಾಣಿರಣ್ಣಾ.