Index   ವಚನ - 1302    Search  
 
ತೆರಹಿಲ್ಲದ ಘನವು ಮನದೊಳಗೆ ನಿಂದು ನೆಲೆಗೊಂಡ ಬಳಿಕ, ಆ ಘನವ ತೆರೆಯ ಮರೆಯಲಡಗಿಸಿಹೆನೆಂದಡೆ ಅಡಗುವುದೆ? ಹೇಮಗಿರಿಯ ಕದ್ದು ಭೂಮಿಯಲಡಗಿಸಿಹೆನೆಂದಡೆ ಆ ಕಳವು ಸಿಕ್ಕದೆ ಮಾಣ್ಬುದೆ? ಕೂಡಲಚೆನ್ನಸಂಗನ ಶರಣ ಪ್ರಭುವಿನಲ್ಲಿ ಬೆರಸಿದ ಸುಖವ ಮರೆಸಿಹೆನೆಂದಡೆ ನಿನ್ನಳವೆ ಹೇಳಾ ಸಂಗನಬಸವಣ್ಣಾ.