Index   ವಚನ - 366    Search  
 
ವಿಷಯದ ಸುಖ ವಿಷವೆಂದರಿಯದ ಮರುಳೆ, ವಿಷಯಕ್ಕೆ ಅಂಗವಿಸದಿರಾ. ವಿಷಯದಿಂದ ಕೆಡನೆ ರಾವಣನು? ವಿಷಯದಿಂದ ಕೆಡನೆ ದೇವೇಂದ್ರನು? ವಿಷಯದಿಂದಾರು ಕೆಡರು ಮರುಳೆ? ವಿಷಯ ನಿರ್ವಿಷಯವಾಯಿತ್ತೆನಗೆ ನಿನ್ನಲ್ಲಿ. ಚೆನ್ನಮಲ್ಲಿಕಾರ್ಜುನಂಗೆ ಒಲಿದವಳ ನೀನಪ್ಪಿಹೆನೆಂದಡೆ ಒಣಗಿದ ಮರನಪ್ಪುವಂತೆ ಕಾಣಾ