ವಚನ - 367     
 
ವೃಷಭನ ಹಿಂದೆ ಪಶುವಾನು ಬಂದೆನು; ನಂಬಿ ನಚ್ಚಿ ಪಶುವಾನು ಬಂದೆನು. ಸಾಕಿ ಸಲಹಿಹನೆಂದು ಸಲೆ ನಚ್ಚಿ ಬಂದೆನು. ಒಲಿದಹ ಒಲಿದಹನೆಂದು ಬಳಿಯಲ್ಲಿ ಬಂದೆನು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ನಂಬಿ ಬಂದ ಹೆಂಗೂಸ ಹಿಂದೊಬ್ಬರೆಳದೊಯ್ದರೆ ಎಂತು ಸೈರಿಸಿದೆ ಹೇಳಾ, ಎನ್ನ ದೇವರದೇವಾ?