Index   ವಚನ - 1322    Search  
 
ನಮ್ಮ ಆದಿಪುರಾತನರು ಪ್ರಸಾದಕ್ಕೆ ತಪ್ಪದೆ ನಡೆದರು, ನಡೆ ತಪ್ಪದೆ ನುಡಿದರು. ಇಂತಪ್ಪ ಪುರಾತನರ ವಚನಂಗಳ ಎರಡಿಲ್ಲದೆ ಕೊಂಡಾಡಿ ತನು ಮನ ಧನವ ಎರಡಿಲ್ಲದೆ ಸಮರ್ಪಿಸುವ, ಭಕ್ತರ ಭಕ್ತ ನಾನು, ಆಳಿನಾಳಯ್ಯಾ ನಾನು, ಕೂಡಲಚೆನ್ನಸಂಗನ ಶರಣರು ಸಾಕ್ಷಿಯಾಗಿ.