Index   ವಚನ - 1336    Search  
 
ನಾರಾಯಣ ತನ್ನ ಲೋಕದಲ್ಲಿ ಮಾಡಿದ ಮಂಟಪದಂತಲ್ಲ, ಇಂದ್ರ ನಿಜವನದಲ್ಲಿ ಮಾಡಿದ ಮಂಟಪದಂತಲ್ಲ, ವೀರಭದ್ರ ಭೀಮಾದ್ರಿಯಲ್ಲಿ ರಚಿಸಿದ ಪೂಜಾಮಂಟಪದಂತಲ್ಲ. ಇಲ್ಲಿರ್ಪ ಮಂಟಪದ ಉದಯವ ನೋಡಿದಡೆ ಇದರ ವಿಸ್ತಾರ ಅರಿದಯ್ಯಾ, ಕೂಡಲಚೆನ್ನಸಂಗಮದೇವಾ.