Index   ವಚನ - 1346    Search  
 
ನಿಮ್ಮ ಭಕ್ತಂಗೆ ಮಲತ್ರಯವಿಲ್ಲ; ಅದೇನು ಕಾರಣವೆಂದಡೆ; ತನುವ ಸದಾಚಾರಕ್ಕರ್ಪಿಸಿ, ಮನವ ಮಹಾಲಿಂಗಭಾವದಲಿರಿಸಿ, ಧನವ ನಿಮ್ಮ ಶರಣರ ದಾಸೋಹಕ್ಕೆ ಸವೆಯಬಲ್ಲವನಾಗಿ. ಇಂತೀ ತ್ರಿವಿಧವ ತ್ರಿವಿಧಕ್ಕೆ ಕೊಟ್ಟ ಬಳಿಕ ಆ ಭಕ್ತನ ತನು ನಿರ್ಮಲ, ಆ ಭಕ್ತನ ಮನ ನಿಶ್ಚಿಂತ, ಆ ಭಕ್ತನ ಧನ ನಿರ್ವಾಣ, ಇಂತಪ್ಪ ಭಕ್ತ ಪ್ರಸಾದಕಾಯನಯ್ಯಾ, ಕೂಡಲಚೆನ್ನಸಂಗಮದೇವಾ.