Index   ವಚನ - 1352    Search  
 
ನೀ ನಿಲಿಸಿದಲ್ಲಿ ನಾನಂಜೆ ನಾನಂಜೆ ನಾನಂಜೆನಯ್ಯಾ ಘನವು ಮಹಾಘನಕ್ಕೆ ಶರಣು ಹೊಕ್ಕುದಾಗಿ. ನೀ ನಿಲಿಸಿದ ಧನದಲ್ಲಿ ನಾನಂಜೆ ನಾನಂಜೆನಯ್ಯಾ, ಧನವು ಸತಿಸುತ ಮಾತಾಪಿತರಿಗೆ ಹೋಗದಾಗಿ. ನೀ ನಿಲಿಸಿದ ತನುವಿನಲ್ಲಿ ನಾನಂಜೆ ನಾನಂಜೆನಯ್ಯಾ, ತನು ಸರ್ವಾರ್ಪಿತದಲ್ಲಿ ನಿಹಿತಪ್ರಸಾದಭೋಗಿಯಾಗಿ, ಇಂತೆಲ್ಲರ ಧೀರಸಮಗ್ರನಾಗಿ, ಕೂಡಲಚೆನ್ನಸಂಗಮದೇವಾ, ನಿಮಗಾನಂಜೆನು.