Index   ವಚನ - 1391    Search  
 
ಪೃಥ್ವಿ ಅಪ್ಪು ತೇಜ ವಾಯು ಆಕಾಶವೆಂಬ ಪಂಚಭೂತಂಗಳಲ್ಲಿ ಪಂಚಮುಖಲಿಂಗವ ಪ್ರತಿಷ್ಠೆಯ ಮಾಡಿದನಯ್ಯಾ. ಮನ ಬುದ್ಧಿ ಚಿತ್ತ ಅಹಂಕಾರವೆಂಬ ಅಂತಃಕರಣ ಚತುಷ್ಟಯದಲ್ಲಿ ಚತುರ್ಮುಖಲಿಂಗವ ಪ್ರತಿಷ್ಠೆಯ ಮಾಡಿದನಯ್ಯಾ. ಶ್ರೋತ್ರ ನೇತ್ರ ಘ್ರಾಣ ತ್ವಕ್ಕು ಜಿಹ್ವೆ ವಾಕ್ಕು ಪಾಣಿ ಪಾದ ಪಾಯು ಗುಹ್ಯಗಳೆಂಬ ದಶೇಂದ್ರಿಯಂಗಳಲ್ಲಿ ದಶಮುಖಲಿಂಗವ ಪ್ರತಿಷ್ಠೆಯ ಮಾಡಿ, ಅಂತರಂಗ ಬಹಿರಂಗವ ಹತವ ಮಾಡಿದನಯ್ಯಾ ಕೂಡಲಚೆನ್ನಸಂಗಮದೇವಾ ಎನ್ನ ಶ್ರೀಗುರು ಬಸವಣ್ಣನು.