Index   ವಚನ - 1422    Search  
 
ʼಬಸವ' ಎಂಬ ಮೂರಕ್ಷರ ಹೃದಯಕಮಲದಲ್ಲಿ ನೆಲೆಗೊಂಡಡೆ, ಅಭೇದ್ಯ ಭೇದ್ಯವಾಯಿತ್ತು, ಅಸಾಧ್ಯ ಸಾಧ್ಯವಾಯಿತ್ತು. ಇಂತು ಬಸವಣ್ಣನಿಂದ ಲೋಕಲೌಕಿಕದ ಕುಭಾಷೆಯ ಕಳೆದು, ಲೋಕಾಚರಣೆಯನತಿಗಳೆದು ಭಕ್ತಿಭರವಪ್ಪುದು, ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣನ ಕಾರುಣ್ಯದಿಂದ.