Index   ವಚನ - 1425    Search  
 
ಬಸವಣ್ಣ ಮರ್ತ್ಯಲೋಕಕ್ಕೆ ಬಂದು ಮಹಾಮನೆಯ ಕಟ್ಟಿ, ಭಕ್ತಿಜ್ಞಾನವೆಂಬ ಜ್ಯೋತಿಯನೆತ್ತಿ ತೋರಲು, ಸುಜ್ಞಾನವೆಂಬ ಪ್ರಭೆ ಪಸರಿಸಿತಯ್ಯಾ ಜಗದೊಳಗೆ. ಬೆಳಗಿನೊಳು ತಿಳಿದು ನೋಡಿ ಹರೆದಿದ್ದ ಶಿವಗಣಂಗಳೆಲ್ಲ ನೆರೆದು ಕೂಡಿತಯ್ಯಾ. ಕೂಡಲಚೆನ್ನಸಂಗಮದೇವಾ, ನಿಮ್ಮ ಶರಣ ಬಸವಣ್ಣನ ಕೃಪೆಯಿಂದ ಪ್ರಭುದೇವರ ನಿಜವನರಿದು ನಿಶ್ಚಿಂತರಾದರಯ್ಯಾ, ಶಿವಗಣಂಗಳೆಲ್ಲರು.