Index   ವಚನ - 1459    Search  
 
ಭಕ್ತಿಗೆ ಅನುಭಾವವೆ ಬೀಜ ಕಾಣಿರೆ, ಭಕ್ತಿಗೆ ಅನುಭಾವವೆ ಆಚಾರ ಕಾಣಿರೆ, ಅನುಭಾವವಿಲ್ಲದವನ ಭಕ್ತಿ ಎಳತಟಗೊಳಿಸಿತ್ತು. ಅನುಭಾವವ ಮಾಡುವಲ್ಲಿ ವಿನಯದಿಂದ ಕೇಳದಿದ್ದಡೆ ಕೂಡಲಚೆನ್ನಸಂಗಮದೇವರು ಅಘೋರನರಕದಲ್ಲಿಕ್ಕುವ.