Index   ವಚನ - 1468    Search  
 
ಭವಿತನಕ್ಕೆ ಹೇಸಿ ಭಕ್ತನಾಗಬೇಕೆಂದು, ಜಂಗಮವ ಕಂಡು ಗೃಹಕ್ಕೆ ಬಿಜಯಂಗೈಸಿ ತಂದು, ತೊತ್ತಿನ ಕೈಯಲ್ಲಿ ಅಗ್ಗವಣಿಯ ತಂದಿರಿಸಿ ಪಾದಾರ್ಚನೆಯ ಮಾಡುವ ಭಕ್ತನ ಯುಕ್ತಿಯ ಕೇಳಿರಣ್ಣಾ! ಭಕ್ತರ ಬಸುರಲ್ಲಿ ಬರುತ ಬರುತಲಾ ತೊತ್ತಿನ ಬಸುರಲ್ಲಿ ಬರುತ್ತಿಪ್ಪನು ಕಾಣಾ ಕೂಡಲಚೆನ್ನಸಂಗಮದೇವಾ.