ವಚನ - 382     
 
ಸಜ್ಜನೆಯಾಗಿ ಮಜ್ಜನಕ್ಕೆರೆವೆ, ಶಾಂತಳಾಗಿ ಪೂಜೆ ಮಾಡುವೆ, ಸಮರತಿಯಿಂದ ನಿಮ್ಮ ಹಾಡುವೆ, ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮನಗಲದ ಪೂಜೆ ಅನುವಾಯಿತ್ತೆನಗೆ.