Index   ವಚನ - 1485    Search  
 
ಮಂಡೆ ಮಾಸಿದಡೆ ಮಹಾಮಜ್ಜನವ ಮಾಡುವುದು; ವಸ್ತ್ರ ಮಾಸಿದಡೆ ಮಡಿವಾಳರಿಗಿಕ್ಕುವುದು; ಮನದ ಮೈಲಿಗೆಯ ತೊಳೆಯಬೇಕಾದಡೆ ಕೂಡಲಚೆನ್ನಸಂಗಯ್ಯನ ಶರಣರ ಅನುಭಾವವ ಮಾಡುವುದು.