Index   ವಚನ - 1503    Search  
 
ಮರುತನ ಸಂಗದಿಂದ ಪರಿಮಳ ಬೀಸರವಾಯಿತ್ತು, ನುಡಿಯ ಗಡಣದಿಂದ ಅನುಭಾವ ಬೀಸರವಾಯಿತ್ತು, ಮಾಟದ ಸಂಭ್ರಮದಿಂದ ಭಕ್ತಿ ಬೀಸರವಾಯಿತ್ತು. ಕೂಟದ ಬೆರಕೆಯ ಸಂಭ್ರಮದಿಂದ ಅರಿವು ಬೀಸರವಾಯಿತ್ತು. ಸೂಕ್ಷ್ಮ ಶಿವಪಥವು ಸಾಮಾನ್ಯಂಗಳವೆ? ಕೂಡಲಚೆನ್ನಸಂಗನ ಶರಣರಿಗಲ್ಲದಿಲ್ಲ.